Breaking News
Home / ರಾಜಕೀಯ / ಬೈಕ್​ ಕಾರು ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು.!

ಬೈಕ್​ ಕಾರು ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು.!

Spread the love

ಗದಗ : ಗದಗ ತಾಲೂಕಿನ ಅಡವಿ ಸೋಮಾಪೂರ ಬಳಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ನಡೆದಿದೆ.

ಮೃತ ದುರ್ದೈವಿಗಳು ಮುಂಡರಗಿ ತಾಲೂಕಿನ ಸಿಂಗಟರಾಯನಕೇರಿ ತಾಂಡಾದ ನಿವಾಸಿಗಳು ಶಿವಪ್ಪ ನಾಯಕ್ (50), ಶಿವಾನಂದ ಲಮಾಣಿ (33) ಕೃಷ್ಣಪ್ಪ ಚೌಹ್ವಾನ್ ಎಂದು ತಿಳಿದುಬಂದಿದೆ. ಅಡವಿ ಸೋಮಾಪುರ ಗ್ರಾಮದಿಂದ ಮುಂಡರಗಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಟಿವಿಎಸ್ ಎಕ್ಸೆಲ್, ಹೀರೋ ಸ್ಪ್ಲೆಂಡರ್ ಹಾಗೂ ಚವರ್ಲೆಟ್ ಕಾರ್ಮ ಮಧ್ಯೆ ಸರಣಿ ಅಪಘಾತ ಅಪಘಾತ ಸಂಭವಿಸಿದೆ. ಗದಗ ಕಡೆಯಿಂದ ಕಾರು ಅತೀ ವೇಗವಾಗಿ ಬಂದು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ