Breaking News

ವಾಟ್ಸಪ್‌ನಲ್ಲಿ ಪಾಕ್ ಪರ ಪೋಸ್ಟ್ ಮಾಡಿದ್ದ ಯುವಕ ಕಂಬಿಹಿಂದೆ.!

Spread the love

ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಕಾನಬಾವಿಯಲ್ಲಿ ಪಾಕಿಸ್ತಾನ ಪರ ಬರಹ ಬರೆದು ಅದನ್ನು ವಾಟ್ಸಪ್‌ನಲ್ಲಿ ಪೋಸ್ಟ್ ಮಾಡಿರುವ ಆರೋಪದ ಹಿನ್ನೆಲೆ ಯುವಕನನ್ನು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ ಘಟನೆ ನಡೆದಿದೆ.

ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ (31) ಎಂಬಾತನನ್ನು ಇಲ್ಲಿನ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ವಿಜಯಪುರದ ದರ್ಗಾ ಜೈಲಿಗೆ ಕಳುಹಿಸಿದ್ದಾರೆ.

ವೀರೇಶ, ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಅಪ್ಪಾಜಿ ನಾಡಗೌಡರ ಹೆಸರಿನ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಬರಹವನ್ನು ಶೇರ್ ಮಾಡಿದ್ದ. ಇದು ಅಲ್ಲಿನ ಅನ್ಯ ಕೋಮಿನವರಿಗೆ ಗೊತ್ತಾಗಿ ಪೊಲೀಸ್ ಔಟ್‌ಪೋಸ್ಟ್ ಗೆ ಕರೆತಂದು ಪೊಲೀಸರ ವಶಕ್ಕೆ ಒಪ್ಪಿಸಿ ಕ್ರಮಕ್ಕೆ ಆಗ್ರಹಿಸಿದ್ದರು.

ವಿಚಾರಣೆ ವೇಳೆ ವೀರೇಶ ತಪ್ಪು ಮಾಡಿದ್ದು ಸಾಬೀತಾಗಿತ್ತು. ಅಲ್ಲಿಂದ ಅವನನ್ನು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗಿತ್ತು. ಇನ್ನೂ ಈತ ಬರಹ ರೂಪದಲ್ಲಿ ಪಾಕಿಸ್ತಾನ ಪರ ಘೋಷಣೆಯ ಪೋಸ್ಟ್ ಶೇರ್ ಮಾಡಿರುವುದು ದೃಢಪಟ್ಟಿರುವ ಹಿನ್ನೆಲೆ ಆತನ ಬಂಧನವಾಗಿದೆ.ನಾಲತವಾಡ ಭಾಗದ ಬೀಟ್ ಪೊಲೀಸ್ ಪಿ.ಎಸ್.ಪಾಟೀಲ ಅವರು ಸರ್ಕಾರದ ತರ್ಪೆ ಸಲ್ಲಿಸಿದ ದೂರಿನನ್ವಯ ಐಪಿಸಿ ಕಲಂ 153, 153 (ಎ) ಮತ್ತು 153 (ಬಿ) ಅಡಿ ಪಿಎಸ್ಐ ಆರೀಫ ಮುಷಾಪುರಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಕೊಂಡಿದ್ದಾರೆ.

Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ