ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ. ಕಾರಿನಲ್ಲಿದ್ದವರು ಕೆಳಗೆ ಇಳಿಯುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದುರಂತವೊಂದು ತಪ್ಪಿದೆ ಎನ್ನಬಹುದು.