Breaking News

ಪ್ರಯಾಣಿಸುತ್ತಿದ್ದಾಕೆಗೆ ಬಸ್​ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್​

Spread the love

ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಮಹಿಳಾ ಕಂಡಕ್ಟರ್​ ಬಸ್​ನಲ್ಲೇ ಹೆರಿಗೆ ಮಾಡಿಸಿದ ಅಪರೂಪದ ಪ್ರಸಂಗವೊಂದು ನಡೆದಿದೆ.

ಚಿಕ್ಕಮಗಳೂರು ಘಟಕದ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಈ ಪ್ರಕರಣ ನಡೆದಿದೆ.ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆಎ-13 ಎಫ್-0855ರಲ್ಲಿ ಬೆಂಗಳೂರು-ಚಿಕ್ಕಮಗಳೂರು ಮಾರ್ಗವಾಗಿ ನಿನ್ನೆ ತೆರಳುತ್ತಿದ್ದಾಗ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.25ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಬಸ್​ನಲ್ಲಿ 15 ಪ್ರಯಾಣಿಕರಿದ್ದರು. ಈ ಬಸ್​ನಲ್ಲಿ ಬೇಲೂರಿಗೆ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಉಂಟಾಗಿದ್ದು, ಹತ್ತಿರ ಯಾವುದೂ ಆಸ್ಪತ್ರೆ ಇರಲಿಲ್ಲ. ಆಕೆಗೆ ತಕ್ಷಣದ ಸಹಾಯದ ಅಗತ್ಯವಿರುವುದನ್ನು ಮನಗಂಡ ಬಸ್​ ನಿರ್ವಾಹಕಿ ಹಾಗೂ ಚಾಲಕಿಯೂ ಆಗಿರುವ ಎನ್​. ವಸಂತಮ್ಮ ಕೂಡಲೇ ಬಸ್​ ನಿಲ್ಲಿಸಿದರು.

ನಂತರ ವಾಹನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಬಸ್​ನಿಂದ ಕೆಳಕ್ಕಿಳಿಸಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಗರ್ಭಿಣಿ ಮಹಿಳೆ ಆರ್ಥಿಕವಾಗಿ ಸಬಲರಲ್ಲದ್ದರಿಂದ ಆಕೆಯ ತುರ್ತು ಖರ್ಚಿಗಾಗಿ ಪ್ರಯಾಣಿಕರಿಂದ ಒಟ್ಟು 1,500 ರೂ. ಸಂಗ್ರಹಿಸಿ ನೀಡಿರುತ್ತಾರೆ. ಬಳಿಕ ಆ್ಯಂಬುಲೆನ್ಸ್​ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿ ದಾಖಲಿಸಿರುತ್ತಾರೆ.


Spread the love

About Laxminews 24x7

Check Also

ಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ

Spread the loveಗೋಕಾಕ ನಗರದ ಶೆಪರ್ಡ್ ಮಿಷನ್ ಆಂಗ್ಲ ಮಾದ್ಯಮ ಶಾಲೆಯ 16 ನೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ