Breaking News

ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ:ಸುರ್ಜೇವಾಲ

Spread the love

ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ, ಸುಳ್ಳು ಸಿದ್ದಿಗಳಿಗೆ ಕಿವಿಗೊಡಬೆಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸುರ್ಜೆವಾಲಾ, ಇಂದು ಸಂಜೆ ಅಥವಾ ನಾಳೆ ಸಿಎಂ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಘೋಷಣೆ ಮಾಡಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಅವಿರೋಧವಾಗಿ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡಲು ಯತ್ನಿಸುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಯ್ಕೆ ಮಾಡಲಿದ್ದಾರೆ.ಎಂದರು.

ಸಿಎಂ ಆಯ್ಕೆ ಅಂತಿಮವಾಗಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಯಾರೂ ಕೂಡ ಊಹಾಪೂಹಗಳಿಗೆ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಸಿಎಂ ಆಯ್ಕೆ, ಪ್ರಮಾಣವಚನದ ಬಳಿಕ ಸಂಪುಟ ರಚನೆಯಾಗಲಿದೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್ ನಲ್ಲಿ ಯಾವುದೇ ಸಮಸ್ಯೆಗಳೂ ಇಲ್ಲ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಿಗೆ ಯಾವುದೆ ಮಹತ್ವ ಬೇಡ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಇಂದು ಸಂಜೆ ಅಥವಾ ನಾಳೆಯೊಳಗಾಗಿ ನೂತನ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ