ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ರಾಮನಗರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕುಮಾರ್ ನೇತೃತ್ವದಲ್ಲಿ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ರಾಮನಗರದ ಐಜೂರು ವೃತ್ತದಲ್ಲಿ ಮೈಸೂರು-ಬೆಂಗಳೂರು ಹಳೇ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಡಿಕೆ… ಡಿಕೆ..
ಎಂದು ಘೋಷಣೆ ಕೂಗಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಪೋಸ್ಟರ್ ಗಳನ್ನ ಹಿಡಿದು ಹೈಕಮಾಂಡ್ ಗೆ ಸಿಎಂ ಹುದ್ದೆ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಬಿಗಿ ಪೊಲೀಸ್ ಬಂದೂಬಸ್ತ್
ರಸ್ತೆಯಲ್ಲೇ ಧರಣಿ ಕುಳಿತು ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದು, ಒಕ್ಕಲಿಗರನ್ನ ಸಿಎಂ ಮಾಡಿ ಎಂದು ಘೋಷಣೆ ಕೂಗುತ್ತಿದ್ದಾರೆ. ಪೋಸ್ಟರ್ ನಲ್ಲಿ ಡಿ.ಕೆ. ಬಾಸ್ ಸಿಎಂ ಎಂದು ಬರೆದು ಪ್ರದರ್ಶನ ಮಾಡುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ
Laxmi News 24×7