Breaking News

ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ5 ಸಾವು

Spread the love

ಅಮರಾವತಿ: ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 7 ಜನ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಮಂಡಲದಲ್ಲಿ ನಡೆದಿದೆ.

ಆಟೊ ರಿಕ್ಷಾದಲ್ಲಿ 12 ಜನ ಕಾರ್ಮಿಕರು ಪ್ರಯಾಣಿಸುತ್ತಿದ್ದು ಇವರಲ್ಲಿ 5 ಜನ ಸ್ಥಳದಲ್ಲಿ ಅಸು ನೀಗಿದರು. ಗಾಯಗೊಂಡವರನ್ನು ಗುರ್ಜಾಲ, ಮಿರ್ಯಾಲಗೂಡ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರೆಲ್ಲ ರಾಮಾಲಯದತ್ತ ಸಾಗುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿ ನೇರವಾಗಿ ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಘಟನೆ ಸಂಭವಿಸುತ್ತಲೇ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ 

Spread the loveABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು. ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ