Breaking News
Home / ರಾಜ್ಯ / ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್‌ ತಂತ್ರ: ಛಲವಾದಿ ನಾರಾಯಣಸ್ವಾಮಿ

ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್‌ ತಂತ್ರ: ಛಲವಾದಿ ನಾರಾಯಣಸ್ವಾಮಿ

Spread the love

ಬೆಂಗಳೂರು: ಮುಖ್ಯಮಂತ್ರಿಯಾಗುವುದಕ್ಕೆ ಸಿದ್ದರಾಮಯ್ಯ ಬ್ಲ್ಯಾಕ್‌ವೆುàಲ್‌ ತಂತ್ರ ಅನುಸರಿಸುತ್ತಿದ್ದಾರೆ. ಸೋನಿಯಾ ಗಾಂಧಿಯವರಿಗೆ ಫೋನ್‌ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

 

ಪತ್ರಕರ್ತರೊಂದಿಗೆ ಅವರು ಮಾತನಾಡಿ, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಬೆದರಿಸಿದ್ದರು. ವಿಪಕ್ಷ ನಾಯಕ ಸ್ಥಾನ ಸಿಗದೆ ಇದ್ದರೆ ನನ್ನ ದಾರಿ ನನಗೆ ಎಂದಿದ್ದರು. ಬಳಿಕ 2013ರಲ್ಲಿ ಮುಖ್ಯಮಂತ್ರಿಯಾದರು. ಇಲ್ಲಿಯವರೆಗೂ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಅವರು ಕೊಟ್ಟಿದ್ದಕ್ಕಿಂತ ಪಡೆದುದೇ ಹೆಚ್ಚು ಎಂದು ವ್ಯಂಗ್ಯವಾಡಿದ್ದಾರೆ.

ಸುಜೇìವಾಲಾ ನಮ್ಮ ಪಕ್ಷದ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದ್ದಾರೆ. ನಾಳೆ ಮಧ್ಯಾಹ್ನ 3.30ಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಇದೆ ಎಂದಿದ್ದರು. ನೀವು ಯಾರನ್ನಾದರೂ ಸಿಎಂ ಮಾಡಿ ಅದು ನಮಗೆ ಸಂಬಂಧಪಡದೇ ಇರುವ ವಿಚಾರ. ಆದರೆ ಕೊಟ್ಟ ಗ್ಯಾರಂಟಿಯನ್ನು ಮೊದಲು ಈಡೇರಿಸಿ. ಕಾಂಗ್ರೆಸ್‌ ಭರವಸೆ ಕಾರಣಕ್ಕೆ ಜನ ವಿದ್ಯುತ್‌ ಬಿಲ್‌ ಕಟ್ಟುವುದಿಲ್ಲ ಎಂದು ಎಲ್ಲ ಕಡೆ ಹೇಳುತ್ತಿದ್ದಾರೆ. ಉಚಿತ ಪ್ರಯಾಣ ಎಂದಿನಿಂದ ಎಂದು ಹೆಣ್ಣುಮಕ್ಕಳು ಕಾಯುತ್ತಿದ್ದಾರೆ. ಅವರೂ ಟಿಕೆಟ್‌ ಪಡೆಯದೆ ಓಡಾಡುವ ಸ್ಥಿತಿ ಬರಬಹುದು ಎಂದು ತಿಳಿಸಿದರು.

ದಲಿತರು ತಮಗೂ ಅವಕಾಶ ಕೊಡಿ ಎಂದು ಕಾಂಗ್ರೆಸ್‌ ಕಚೇರಿ ಮುಂದೆ ಹೋರಾಟ ಮಾಡುತ್ತಿದ್ದಾರೆ. ನಾಳೆಯಿಂದ ಅವರ ಹೋರಾಟ ತೀವ್ರಗೊಳ್ಳಲಿದೆ ಎಂದು ಗೊತ್ತಾಗಿದೆ. ಈ ಬಾರಿ ಸಿಎಂ ಸ್ಥಾನ ಸಿಗಲೇಬೇಕೆಂದು ಡಿ.ಕೆ.ಶಿವಕುಮಾರ್‌-ಸಿದ್ದರಾಮಯ್ಯ ಅವರು ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ಸಿಗೆ ಹೋದ ಸಿದ್ದರಾಮಯ್ಯ, 2009ರಿಂದ ಇವತ್ತಿನವರೆಗೂ ಅಧಿಕಾರದಲ್ಲಿ¨ªಾರೆ. ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ಸಿಎಂ ವಿಚಾರದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ