Breaking News

ಒಳ ಮೀಸಲಾತಿ ಶಿಫಾರಸು ಆದೇಶ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the love

ಬೆಂಗಳೂರು : ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಅಧ್ಯಕ್ಷ ರವಿಮಾಕಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತಾಮನಾಥ ಹೆಗಡೆ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಿದೆ.

 

ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಬೇಕು: ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿ ಹೆಚ್. ವಿ. ಮಂಜುನಾಥ, ಕಾನೂನು ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿಯವರ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿ ಯಾವುದೇ ಅಧ್ಯಯನ ನಡೆಸದೆ ಆತುರವಾಗಿ ನೀಡಿದ ವರದಿಯನ್ನು ಆಧರಿಸಿ ಪರಿಶಿಷ್ಟ ಜಾತಿಗಳನ್ನು ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವುದಕ್ಕೆ ನಿರ್ಧರಿಸಿದೆ. ಈ ನಿರ್ಧಾರದಿಂದ ಬಂಜಾರ, ಭೋವಿ, ಕೊರಮ, ಕೊರಚ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಬೇಕು ಎಂದು ಕೋರಿದರು.

ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸೀಟು ನೀಡಲು ಅಗತ್ಯ ತಿದ್ದುಪಡಿಗೆ ಆಗ್ರಹ: ರಾಜಧಾನಿಯ ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸೀಟುಗಳನ್ನು ಮೀಸಲಿಡುವ ಕುರಿತು ನೀತಿಗೆ ತಿದ್ದುಪಡಿ ಮಾಡುವಂತೆ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ