ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ.
ಅತ್ತೆಗೆ ನಿಖ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7