Breaking News

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು,ಕೋವಿಡ್ ವಾರ್ಡಿಗೆ ಹೋಗೋಕೆ ಸಿಬ್ಬಂದಿಗೆ ಭಯ

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಚಿಕ್ಕವರಿಂದ ಹಿಡಿದು ವಯೋವೃದ್ಧರವರೆಗೂ ಸೋಂಕು ಇನ್ನಿಲ್ಲದಂತೆ ಹರಡುತ್ತಿದೆ. ಈ ಮಧ್ಯೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ಸಹ ಕೊರೊನಾ ಬೆನ್ನು ಬಿಡದೇ ಕಾಡ್ತಾ ಇದೆ. ಹೀಗಾಗಿ ನೂರಾರು ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೋಂಕು ಹರಡುತ್ತಿರುವ ಪರಿಣಾಮ ವೈದ್ಯರು ಸಹ ಚಿಕಿತ್ಸೆ ನೀಡಲು ಹಿಂದೆ ಮುಂದೆ ನೋಡುವಂತಾಗಿದೆ.

ರಾಜ್ಯದಲ್ಲಿ ಕಿಲ್ಲರ್ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲೂ ಸಹ ಕೊರೊನಾ ರಣಕೇಕೆ ಹಾಕುತ್ತಿದೆ. ಈಗಾಗಲೇ 20 ಸಾವಿರದ ಗಡಿಯತ್ತ ಸಾಗಿರುವ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಸಾಗಿದೆ. ಆದರೆ ಸೋಂಕಿತರಿಗೆ ಚಿಕಿತ್ಸೆ ನೀಡಲು ವಾರಿಯರ್ಸ್ ಗಳಾಗಿರುವ ವೈದ್ಯಕೀಯ ಸಿಬ್ಬಂದಿಗೂ ಸಹ ಇದೀಗ ಸೋಂಕು ಬೆನ್ನು ಬಿಡದೇ ಕಾಡ್ತಾ ಇರೋದು ವೈದ್ಯರಲ್ಲಿ ಆತಂಕ ಮೂಡಿಸಿದೆ. ಕೊರೊನಾ ವಾರ್ಡಿನಲ್ಲಿ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು ಹರಡಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಈಗಾಗಲೇ 5 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ಚಿಕಿತ್ಸೆ ಪಡೆದ್ರೆ 500ಕ್ಕೂ ಅಧಿಕ ಜನರು ಕಿಮ್ಸ್ ಆಸ್ಪತ್ರೆಯಲ್ಲಿ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಸೋಂಕಿತರಿಗೆ ಚಿಕಿತ್ಸೆ ನೀಡಿದ 165 ಕ್ಕೂ ಹೆಚ್ಚು ವೈದ್ಯರು- ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ಸಿಬ್ಬಂದಿಯ ಆತ್ಮಸ್ಥೈರ್ಯವನ್ನೇ ಕುಗ್ಗುವಂತೆ ಮಾಡಿದೆ. ಕೋವಿಡ್ ವಾರ್ಡಿನಲ್ಲಿ ಕಾರ್ಯನಿರ್ವಹಿಸಲು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕುವಂತೆ ಮಾಡಿದೆ. ಅಲ್ಲದೇ ವೈದ್ಯರು ವೈದ್ಯಕೀಯ ಸಿಬ್ಬಂದಿಗೆ ಸೂಕ್ತ ನೆರವು ಸುರಕ್ಷತೆಯ ಕಿಟ್ ಗಳನ್ನ ಅವಶ್ಯಕತೆ ನೀಡುವುದು ಅವಶ್ಯವಾಗಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು ಇದೀಗ ಇನ್ನಿಲ್ಲದಂತೆ ಹರಡುತ್ತಿದೆ. ಹೀಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ಕಾರ್ಯನಿರ್ವಹಿಸಲು ವೈದ್ಯರು ವೈದ್ಯಕೀಯ ಸಿಬ್ಬಂದಿ ಇದೀಗ ಹಿಂದೇಟು ಹಾಕುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಹೀಗಾಗಿ ಸರ್ಕಾರ ಕಿಲ್ಲರ್ ಕೊರೊನಾ ವಿರುದ್ಧ ಹೋರಾಡುವ ವೈದ್ಯರು ವೈದ್ಯಕೀಯ ಸಿಬ್ಬಂದಿಗೆ ಇನ್ನಷ್ಟು ಸುರಕ್ಷತಾ ಕಿಟ್ ಗಳನ್ನ ನೀಡಿ ವಾರಿಯರ್ಸ್ ಗಳಿಗೆ ನೆರವು ನೀಡಲು ಮುಂದಾಗಬೇಕಿದೆ.


Spread the love

About Laxminews 24x7

Check Also

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

Spread the love ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ