Breaking News

ಪವಿತ್ರಾ ಲೋಕೇಶ್ ಹಾಗೂ ತಮ್ಮ ಸಂಬಂಧದ ಬಗ್ಗೆ ಸತ್ಯ ನುಡಿದ ನಟ ನರೇಶ್

Spread the love

Pavitra Lokesh-Naresh: ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು. ಇದೀಗ ನಟ ನರೇಶ್ ತಮ್ಮ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಬಗ್ಗೆ ಸತ್ಯ ನುಡಿದಿದ್ದಾರೆ.ತೆಲುಗು ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ಅವರ ಸಂಬಂಧದ ಕುರಿತು ಕಳೆದ ವರ್ಷ ಬಹುವಾಗಿ ಸುದ್ದಿಯಾಗಿತ್ತು.

ನರೇಶ್​ರ ಮೂರನೇ ಪತ್ನಿ ರಮ್ಯಾ ರಘುಪತಿ ಕರ್ನಾಟಕದ ಮಾಧ್ಯಮಗಳ ಮುಂದೆ ಬಂದು ತಮಗೆ ನರೇಶ್ ಅನ್ಯಾಯ ಮಾಡಿದ್ದಾರೆಂದು, ತಮ್ಮ ಸಂಸಾರ ಹಾಳಾಗಲು ಪವಿತ್ರಾ ಲೋಕೇಶ್ ಕಾರಣವೆಂದು ಅಳಲು ತೋಡಿಕೊಂಡಿದ್ದರು. ಈ ಬಗ್ಗೆ ನರೇಶ್ ಸಹ ಸುದ್ದಿಗೋಷ್ಠಿ ನಡೆಸಿ ರಮ್ಯಾ ವಿರುದ್ಧ ಆರೋಪಗಳನ್ನು ಮಾಡಿದ್ದರು.

ಆಗ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸಂಬಂಧದ ಕುರಿತು ಪ್ರಶ್ನೆಗಳು ಎದ್ದಿದ್ದವು. ಇದೀಗ ನರೇಶ್ ಹಾಗೂ ಪವಿತ್ರಾ ಅವರೇ ಮುಖ್ಯ ಪಾತ್ರದಲ್ಲಿ ನಟಿಸಿರುವ ಮತ್ತೆ ಮದುವೆ ಸಿನಿಮಾದ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಈ ಜೋಡಿಗೆ ಮತ್ತೆ ಅದೇ ಪ್ರಶ್ನೆ ಎದುರಾಯಿತು.

ತಮ್ಮ ಹಾಗೂ ಪವಿತ್ರಾ ಲೋಕೇಶ್​ರ ಸಂಬಂಧದ ಬಗ್ಗೆ ಮಾತನಾಡಿದ ನರೇಶ್, ”ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ನಾನಂತೂ ಸಿಂಗಲ್‌ ಅಲ್ಲ, ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರೀಲೇಶನ್‌ಶಿಪ್‌ನಲ್ಲಿದ್ದೇವೆ” ಎಂದು ಬಹಿರಂಗವಾಗಿ ಒಪ್ಪಿಕೊಂಡರು.

ಕಳೆದ ವರ್ಷ ನಡೆದ ವಿವಾದಗಳ ಬಗ್ಗೆ ಮಾತನಾಡಿದ ನಟಿ ಪವಿತ್ರಾ ಲೋಕೇಶ್, ”ನನ್ನ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ, ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು” ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ