ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿಯ ಹಲವು ಭಾಗಗಗಲ್ಲಿ ಅಲ್ಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಸುಮಾರು 3 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿದಿದೆ.
ಕಾರ್ಮೋಡ ಕವಿದು, ಗುಡುಗು- ಸಿಡಿಲು ಸಹಿತ ಭರ್ಜರಿಯಾಗಿ ಮಳೆ ಸುರಿದಿದೆ.
ಈ ಮಳೆಯಿಂದಾಗಿ ನಗರಸ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಜಯನಗರ, ಮಲ್ಲೇಶ್ವರ ಸೇರಿ ಹಲವೆಡೆ ವಾಹನ ಸವಾರರು ದಾರಿ ಕಾಣದೆ ರಸ್ತೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಸೃಷ್ಟಿಯಾಯಿತು.
ರೇಸ್ ಕೋರ್ಸ್ ರಸ್ತೆಯಲ್ಲಿ ಐಷಾರಾಮಿ ಕಾರು ನಜ್ಜುಗುಜ್ಜಾಗಿದೆ. ಕುಮಾರ್ ಕೃಪಾ ರಸ್ತೆಯಲ್ಲಿನ ಚಿತ್ರಕಲಾ ಪರಿಷತ್ ಮುಂದೆ ಕಾರು ಮತ್ತು ಬೈಕ್ ಮೇಲೆ ಭಾರಿ ಗಾತ್ರದ ಮರ ಬಿದ್ದು ವಾಹನಗಳು ಸಂಪೂರ್ಣ ಜಖಂ ಆಗಿದೆ. ಈ ವೇಳೆ ಕಾರಿನಲ್ಲಿ ಇದ್ದವರಿಗೂ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.