ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡವರು.
ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕ ಶಾಂತಮೂರ್ತಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ ವನ್ನು ಪಟ್ಟಿ ಮಾಡಿ ಪ್ರಕಟಿಸಿದ್ದರು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಟೀಕಿಸಿದ್ದರು. ಅವಹೇಳನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಶಿಕ್ಷಕ ಶಾಂತಮೂರ್ತಿಯನ್ನು ಅಮಾನತುಗೊಳಿಸಲಾಗಿದೆ.
Laxmi News 24×7