ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ.
ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ.
ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ ನಿತ್ರಾಣಗೊಂಡು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ. ಜತೆಗೆ ಚಿರತೆಯ ಮೃತದೇಹವನ್ನು ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7