Breaking News

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು.. ಅರಣ್ಯಾಧಿಕಾರಿಗಳಿಗೆ ಜನ ಹೇಳಿದ್ದೇನು?

Spread the love

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ.

ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ.

ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ ನಿತ್ರಾಣಗೊಂಡು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ. ಜತೆಗೆ ಚಿರತೆಯ ಮೃತದೇಹವನ್ನು ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ