Breaking News

ಸಂಚಾರ ದಟ್ಟಣೆ: ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Spread the love

ಬೆಂಗಳೂರು: ಮಹಾನಗರದ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ತಮಗೆ ನೀಡಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.

ಇಂದು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕೆ ಆರ್ ವೃತ್ತ ಸಮೀಪ ಸಂಭವಿಸಿದ ಅವಘಡದಲ್ಲಿ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ಯುವತಿಯೊಬ್ಬರು ಸಾವನ್ನಪ್ಪಿದ್ದರೆ. ಘಟನೆ ಸ್ಥಳ ಪರಿಶೀಲನೆ ಹಾಗೂ ಯುವತಿಯನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾದ ದಟ್ಟಣೆ ಹಾಗೂ ಆ ಸಂದರ್ಭದಲ್ಲಿ ಜನ ಅನುಭವಿಸಿದ ಸಮಸ್ಯೆಯನ್ನು ಮನಗಂಡಿರುವ ಅವರು ತಮಗೆ ಜೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂಬ ನಿರ್ಧಾರ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ