ಬೆಂಗಳೂರು: ಮೇ. 23 ರ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( Karnataka 2nd PUC Supplementary Exam ) ಆರಂಭವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
1) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ.
2) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
3) ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.
ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ
ದ್ವಿತೀಯ PUC’ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಿಎಂಟಿಸಿ ‘BMTC’ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಬಗ್ಗೆ ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.
ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 23.05.2023 ರಿಂದ 03.06.2023 ರವರೆಗೆ ಪೂರಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದು ತಿಳಿಸಿದೆ.
ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ
- ದಿನಾಂಕ 23-05-2023, ಮಂಗಳವಾರ – ಕನ್ನಡ, ಅರೇಬಿಕ್
- ದಿನಾಂಕ 24-05-2023, ಬುಧವಾರ ಲ- ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
- ದಿನಾಂಕ 25-05-2023, ಗುರುವಾರ – ಇಂಗ್ಲೀಷ್
- ದಿನಾಂಕ 26-05-2023, ಶುಕ್ರವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
- ದಿನಾಂಕ 27-05-2023, ಶನಿವಾರ – ಇತಿಹಾಸ, ಸಂಖ್ಯಾಶಾಸ್ತ್ರ
- ದಿನಾಂಕ 29-05-2023, ಸೋಮವಾರ – ಹಿಂದಿ
- ದಿನಾಂಕ 30-05-2023, ಮಂಗಳವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
- ದಿನಾಂಕ 31-05-2023, ಬುಧವಾರ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
- ದಿನಾಂಕ 01-06-2023, ಗುರುವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
- ದಿನಾಂಕ 02-06-2023, ಶುಕ್ರವಾರ – ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
- ದಿನಾಂಕ 03-06-2023, ಶನಿವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ