Breaking News

ಆಪ್ ಪ್ರಣಾಳಿಕೆ ಬಳಸಿಕೊಂಡು ಕಾಂಗ್ರೆಸ್ ಕರ್ನಾಟಕದಲ್ಲಿ ಗೆದ್ದಿದೆ: ಕೇಜ್ರಿವಾಲ್ ಟೀಕೆ

Spread the love

ನವದೆಹಲಿ: ಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣಾ (Karnataka Election Result 2023) ಫಲಿತಾಂಶ ವಿಚಾರವನ್ನು ಪ್ರಸ್ತಾಪಿಸಿದರು. ಆಪ್ ಪ್ರಣಾಳಿಕೆಯಲ್ಲಿ ನಾವು ಬಳಸಿದ್ದ ಅಂಶಗಳನ್ನು ಅವರು ಬಳಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರದ ಗದ್ದುಗೆ ಏರಿದೆ ಎಂದಿದ್ದಾರೆ.

ನಾವು ಉಚಿತ ವಿದ್ಯುತ್, ಪಡಿತರ, ಮಹಿಳೆಯರಿಗೆ ಹಾಗೂ ಯುವಕರಿಗೆ ಮಾಸಿಕ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದೆವು. ಇದನ್ನೇ ಕಾಂಗ್ರೆಸ್ ಪಕ್ಷದವರು ಬಳಸಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ಟೀಕಿಸಿದರು. 

ಬೇರೆ ಪಕ್ಷಗಳು ಶಿಕ್ಷಣ ಹಾಗೂ ಆರೋಗ್ಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತವೆ. ಆದರೆ ಆಪ್ ಪಕ್ಷ ರಾಷ್ಟ್ರ ರಾಜಕಾರಣದ ದಿಕ್ಕನ್ನು ಬದಲಿಸುವ ಪ್ರಯತ್ನದಲ್ಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನಿಸಿದರೆ ಕಾಂಗ್ರೆಸ್ ಪಕ್ಷ ನಮ್ಮ ಪ್ರಣಾಳಿಕೆಯಲ್ಲಿ ಗೆದ್ದಿದೆ ಎಂದು ಲೇವಡಿ ಮಾಡಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ