Breaking News

ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ – ಸಚಿವ ಎಂ.ಬಿ ಪಾಟೀಲ್‌

Spread the love

ಮೈಸೂರು: ಲೋಕಸಭೆ ಚುನಾವಣೆಯ (LokSabha Elections) ಬಳಿಕ ಪಕ್ಷದಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ನೂತನ ಸಚಿವ ಎಂ.ಬಿ ಪಾಟೀಲ್‌ (MB Patil), ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಬ್ಯಾಟ್‌ ಬೀಸಿದ್ದಾರೆ.

ಎಂ.ಬಿ ಪಾಟೀಲ್‌ ದಂಪತಿಗಳಿಂದು ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ 5 ವರ್ಷ ಪೂರ್ಣಾವಧಿ ಸಿಎಂ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಮಾಡುವ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೂ ನಡೆದಿಲ್ಲ, ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷ ಸಿಎಂ ಆಗಿರಲಿದ್ದಾರೆ. ಈ ಬಗ್ಗೆ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ