Breaking News

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

Spread the love

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡುತ್ತಿದ್ದೀರಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕಾಂಗ್ರೆಸ್ ನಾಯಕರ ಭ್ರಮೆ. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಹೆಸರುವಾಸಿಯಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಗೃಹ ಇಲಾಖೆ, ಪೊಲೀಸರ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುವ ಬದಲು ನೈತಿಕ ಸ್ಥೈರ್ಯ ಕುಗ್ಗಿಸುವ ಮಾತನಾಡಿದ್ದಾರೆ. ಇಂತಹ ಕೆಲಸ ಯಾರೂ ಮಾಡಬಾರದು ಎಂದು ಕಿಡಿಕಾರಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಪೊಲೀಸರು ಯಾವುದೇ ಕೇಸರಿಕರಣ ಮಾಡಿಲ್ಲ, ಕಾಂಗ್ರೆಸ್ ನವರು ತಮ್ಮ ಅಜೆಂಡಾ ಮುಂದುವರೆಸಲು ಹೇಳಿದ್ದಾರೆ. ಪೊಲೀಸರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ನಿಸ್ಪಕ್ಷಪಾತವಾಗಿ, ನ್ಯಾಯಯುತವಾಗಿ ಕೆಲಸ ಮಾಡಬೇಕು ಎಂದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ