Breaking News

ಸಿದ್ದರಾಮಯ್ಯ,D.K. ಶಿವಕುಮಾರ ಶಾಸಕರಿಗೆ ಮಹತ್ವದ ಸೂಚನೆ ನೀಡಿದರು

Spread the love

ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದರು.

  • ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ ಬಹುಮತದ ಮೂಲಕ ಜವಾಬ್ದಾರಿ ವಹಿಸಿದ್ದಾರೆ. 5 ವರ್ಷಗಳ ಕಾಲ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಈಡೇರಿಸಿ.
  • ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ.
  • ಬಿಜೆಪಿಯವರು ಮಾಡುವ ಸುಳ್ಳು ಅಪಾದನೆಗಳನ್ನು ಯಶಸ್ವಿಯಾಗಿ ಎದುರಿಸಲು ಎಲ್ಲಾ ಶಾಸಕರು ಕಡ್ಡಾಯವಾಗಿ ಅಧಿವೇಶನದಲ್ಲಿ ಭಾಗವಹಿಸಬೇಕು.
  • ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ.
  • ನಮ್ಮ ನಾಡಿನ‌ ಜನತೆ ಕಟ್ಡುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು.
  • ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ. ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು.
  • ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ ಎಂದು ಹೇಳಿದರು.
  • *ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಕೊಟ್ಟ ಸಲಹೆಗಳು*
  • ಲೋಕಸಭೆ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲಲೇಬೇಕು.
  • ವಿಧಾನಸಭೆ ಚುನಾವಣೆ ಗೆದ್ದೆವು ಎಂದು ಸುಮ್ಮನೆ ಕೂರುವಂತಿಲ್ಲ.
  • ಲೋಕಸಭೆ ಚುನಾವಣೆಯಲ್ಲೂ ಈ ಗೆಲುವಿನ ಯಾನ ಮುಂದುವರೆಯಬೇಕು.
  • ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕು.
  • ಜಿಲ್ಲಾ ಸಚಿವರು ಆಗುವವರು ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು.
  • ನಮಗೆ ಪಕ್ಷದ ಕಚೇರಿಯೇ ದೇಗುಲ. ಅದಕ್ಕೆ ಮೊದಲ ಆದ್ಯತೆ.
  • ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ.
  • ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು.
  • ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು.
  • ರಾಜ್ಯದ ಜನರಿಗೆ  ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು.
  • ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು.

Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ