Breaking News

ವಿಧಾನಸಭಾ ನೂತನ ಸ್ಪೀಕರ್ ಆಗಿ U.T. ಖಾದರ್ ಆಯ್ಕೆ

Spread the love

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ.

ವಿಧಾನಸಭೆಯ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅಧಿಕಾರ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ. ನನ್ನ ಸರ್ಕಾರದ ಅವಧಿಯಲ್ಲಿ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದೀರಿ. ಸದನದಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕೆ ಸದನವೀರ ಪ್ರಶಸ್ತಿಗೂ ಭಾಜನರಾಗಿದ್ದೀರಿ. ಒಬ್ಬ ಮಾದರಿ ಶಾಕನಾಗಿ ಕೆಲಸ ಮಾಡಿದ್ದೀರಿ. ಈಗ ಸ್ಪೀಕರ್ ಆಗಿ ಆಯ್ಕೆಯಾಗಿರುವುದು ಸಂತಸದ ವಿಚಾರ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ