ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ.
ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಸೋಲಿಗೆ ಕಾರಣ ಎಂದಿದ್ದಾರೆ.
ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಬೆಲೆ ಏರಿಕೆಯಂತ ಸಂದರ್ಭದಲ್ಲಿ ಉಚಿತ ಅಕ್ಕಿ ಕಡಿತ ಮಾಡಿದ್ದು ತಪ್ಪು ನಿರ್ಧಾರ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.
Laxmi News 24×7