Breaking News

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Spread the love

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾದಗಿರಿ: ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.
ಯಲ್ಲಕಿ ಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಯಲ್ಲಕಿ ಗೌಡ ಪಿರಿಯಾಪಟ್ಟಣದ ಬ್ಯಾಂಕ್ನಲ್ಲಿ ರೂ.15 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ರೂ.6 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.
ಪಡೆದ ಸಾಲದಿಂದ ಯಲ್ಲಿಕಿ ಗೌಡ ತಮ್ಮ ಮೂರು ಎಕರೆ ಜಮೀನಿನಲ್ಲಿ ತಂಬಾಕು, ಶುಂಠಿ ಬೆಳೆದಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಬೆಳೆ ನಷ್ಟ ಎದುರಾಗಿದ್ದು, ಸಾಲದ ಹೊರೆ ತಾಳಲಾರದೆ, ನಿನ್ನೆ ತಮ್ಮ ಮನೆಯಲ್ಲೇ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ