Home / ರಾಜಕೀಯ / ಬೆಂಗಳೂರಿನ ಅಂಡರ್​ಪಾಸ್​ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ: ತುಷಾರ್ ಗಿರಿನಾಥ್

ಬೆಂಗಳೂರಿನ ಅಂಡರ್​ಪಾಸ್​ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ: ತುಷಾರ್ ಗಿರಿನಾಥ್

Spread the love

ಬೆಂಗಳೂರು : “ಕೆ.ಆರ್.ಸರ್ಕಲ್‌ನಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅಂಡರ್‌ಪಾಸ್‌ಗಳ ಸುರಕ್ಷತೆಯ ಕುರಿತಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಯಾವ ಅಂಡರ್​ಪಾಸ್​ಗಳೂ ಸದ್ಯಕ್ಕೆ ಮುಚ್ಚುವಂತ ಸ್ಥಿತಿಯಲ್ಲಿ ಇಲ್ಲ. ಕೆ.ಆರ್.ಸರ್ಕಲ್ ಹತ್ತಿರ ಕೆಲಸ ಶುರು ಮಾಡಿದ್ದೇವೆ. ಇತರೆ ಕಡೆಗಳಲ್ಲಿಯೂ ಅಗತ್ಯ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಪಾಲಿಕೆ ಮುಖ್ಯ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸೈರನ್ ಅಳವಡಿಸುವ ಕ್ರಮದ ಕುರಿತು ಸರ್ಕಾರದಿಂದ ವರದಿ ಬರುವುದು ಬಾಕಿ ಇದೆ. ಸದ್ಯಕ್ಕೆ ಒಂದು ಸಿಸಿಟಿವಿ, ಲೈಟ್​ಗಳು ಹಾಗೂ ಮ್ಯಾನುವಲ್ ಬ್ಯಾರಿಕೇಡ್ ಅಳವಡಿಸಿದ್ದೇವೆ. ಇವು ಎತ್ತರದಲ್ಲಿದ್ದು ಅಪಾಯ ತಪ್ಪಿಸಲಿವೆ. ಜೊತೆಗೆ, ಬೂಮ್ ಬ್ಯಾರಿಯರ್‌ ಅನ್ನು ಅಳವಡಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಅಂಡರ್​ಪಾಸ್​ಗಳ ಕುರಿತು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಬಾರದು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂಡರ್​ಪಾಸ್ ಕುರಿತು ಹೆಚ್ಚಿನ ಗಮನ ಹರಿಸಬೇಕು ಹಾಗೂ ಸುರಕ್ಷತೆ ಕಡೆ ಅಧಿಕಾರಿಗಳು ಗಮನ ಹರಿಸಬೇಕು” ಎಂದರು.

ಅಂಡರ್‌ಪಾಸ್‌ಗಳಲ್ಲಿ ನೀರು- ಕ್ರಮ ಕೈಗೊಳ್ಳಲು ಮುಂದಾದ ಪಾಲಿಕೆ: ಕಳೆದ ಮೂರು ದಿನಗಳ ಹಿಂದೆ ನಗರದ ಕೆ.ಆರ್.ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್‌ ಒಬ್ಬರು ಸಾವನ್ನಪ್ಪಿದ ಘಟನೆಯ ನಂತರ ಭಾರಿ ಟೀಕೆಗೆ ಒಳಗಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ