Home / ರಾಜಕೀಯ / ಬಿಸಿಲಿನಿಂದ ರಕ್ಷಿಸಲು ಪಾರ್ಕಿಂಗ್ ಸ್ಥಳದಲ್ಲಿ ಮಗು ಮಲಗಿಸಿದ ತಾಯಿ: ಕಾರು ಹರಿದು ಪ್ರಾಣಬಿಟ್ಟ ಬಾಲಕಿ

ಬಿಸಿಲಿನಿಂದ ರಕ್ಷಿಸಲು ಪಾರ್ಕಿಂಗ್ ಸ್ಥಳದಲ್ಲಿ ಮಗು ಮಲಗಿಸಿದ ತಾಯಿ: ಕಾರು ಹರಿದು ಪ್ರಾಣಬಿಟ್ಟ ಬಾಲಕಿ

Spread the love

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಅಪಾರ್ಟ್‌ಮೆಂಟ್​ನ ಪಾರ್ಕಿಂಗ್ ಪ್ರದೇಶದಲ್ಲಿ ಮಲಗಿದ್ದ ಮೂರು ವರ್ಷದ ಪುಟ್ಟ ಬಾಲಕಿಯ ಮೇಲೆ ಕಾರು ಹರಿದಿದ್ದು, ಮಗು ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ದಾರುಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಯತ್‌ನಗರದ ಟೀಚರ್ಸ್ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬುಧವಾರ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಹರಿರಾಮ ಕೃಷ್ಣ ಎಂದು ಗುರುತಿಸಲಾಗಿದೆ. ಪಾರ್ಕಿಂಗ್ ಮಾಡುವಾಗ ನೆಲದ ಮೇಲೆ ಮಲಗಿದ್ದ ಮಗುವನ್ನು ಗಮನಿಸದೇ ಚಾಲನೆ ಮಾಡಿದ್ದಾರೆ. ಇದರ ಪರಿಣಾಮ ಮಲಗಿದ್ದಲ್ಲೇ ಮಗು ಅಸುನೀಗಿದೆ.

ಕರ್ನಾಟಕದಿಂದ ವಲಸೆ ಬಂದಿದ್ದ ಕುಟುಂಬ: ರಾಜು ಮತ್ತು ಕವಿತಾ ಎಂಬ ದಂಪತಿಯ ಮಗು ಅಸುನೀಗಿದೆ. ಕರ್ನಾಟಕದ ಕಲಬುರಗಿ ಜಿಲ್ಲೆಯವರಾದ ಇವರು ತಮ್ಮ ಏಳು ವರ್ಷದ ಮಗ ಮತ್ತು ಪುಟ್ಟ ಮಗಳೊಂದಿಗೆ ಜೀವನೋಪಾಯಕ್ಕಾಗಿ ಹೈದರಾಬಾದ್‌ಗೆ ವಲಸೆ ಬಂದಿದ್ದರು. ರಾಜು- ಕವಿತಾ ಇಬ್ಬರೂ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬುಧವಾರ ಸಹ ಅಪಾರ್ಟ್‌ಮೆಂಟ್ ಕಟ್ಟಡದ ಸಮೀಪದಲ್ಲಿಯೇ ದಂಪತಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನದ ಹೊತ್ತು ಮಗುವನ್ನು ಬಿಸಿಲಿನ ತಾಪದಿಂದ ರಕ್ಷಿಸಲು ಕವಿತಾ ಪಾರ್ಕಿಂಗ್ ಪ್ರದೇಶಕ್ಕೆ ಕರೆತಂದು ಬಿಟ್ಟು ನೆಲದ ಮೇಲೆ ಮಲಗಿಸಿದ್ದರು. ಆದರೆ, ಮನೆಗೆ ಮರಳಿದ ರಾಮಕೃಷ್ಣ ತಮ್ಮ ಕಾರು ಪಾರ್ಕಿಂಗ್ ಮಾಡುವಾಗ ಮಗುವನ್ನು ಗಮನಿಸಲು ವಿಫಲರಾಗಿದ್ದಾರೆ. ಇದರಿಂದ ಕಾರಿನ ಮುಂಭಾಗದ ಚಕ್ರ ಮಗುವಿನ ತಲೆ ಹರಿದು ನಜ್ಜುಗುಜ್ಜಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರು ಚಾಲಕ ರಾಮಕೃಷ್ಣ ಇಂಟೀರಿಯರ್ ಡಿಸೈನರ್ ಆಗಿದ್ದಾರೆ. ಇವರ ಪತ್ನಿ ಅಬಕಾರಿ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಹಯತ್‌ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ