ನವದೆಹಲಿ: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಈಗಾಗಲೇ 8 ಸಚಿವರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಇನ್ನುಳಿದ ಸಚಿವರ ಆಯ್ಕೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಸರಣಿ ಸಭೆಗಳು ನಡೆದಿವೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ವರಿಷ್ಠರನ್ನು ಭೇಟಿಯಾಗಿ ತಮ್ಮ ಬೆಂಬಲಿಗ ನಾಯಕರಿಗೆ ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಜಮೀರ್ ಅಹ್ಮದ್ ಸಾಥ್ ನೀಡಿದ್ದಾರೆ.
ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಒಟ್ಟಾರೆ ಇಂದು ಸಂಜೆ ವೇಳೆಗೆ ಸಚಿವ ಸಂಪುಟ ವಿಸ್ತರಣೆ ಅಂತಿಮವಾಗುವ ಸಾಧ್ಯತೆ ಇದೆ.
Laxmi News 24×7