ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಯುವಕ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೃತ ಯುವಕ ಶಿವಪ್ಪಾ ಬಾಬು ಕಿವಡಿ (28) ಎಂದು ತಿಳಿದುಬಂದಿದೆ. ಈತ ತಮ್ಮ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಥಣಿ ಸಿಪಿಐ, ಐಗಳಿ ಪೊಲೀಸ್ ಠಾಣೆಯ ಪಿಎಸ್ಐ ಪರಿಶೀಲನೆ ನಡೆಸಿದರು.
ಈ ಕುರಿತು ಮೃತನ ಪಾಲಕರು ದೂರು ನೀಡಿದ್ದು, ಯುವಕನ ಶವದ ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಸತ್ಯಾಂಶ ಬಯಲಿಗೆ ಬರಲಿದೆ.