Breaking News
Home / ರಾಜಕೀಯ / ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ: ಸ್ಪೀಕರ್ ಯು ಟಿ ಖಾದರ್

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ: ಸ್ಪೀಕರ್ ಯು ಟಿ ಖಾದರ್

Spread the love

ಮಂಗಳೂರು: ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ಟ್ರೈನಿಂಗ್ ಕ್ಯಾಂಪ್ ಆಯೋಜಿಸಲಾಗುವುದು ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಹೇಳಿದರು.

 

ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶೇ.70ರಷ್ಟು ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳೇನು?. ಅದನ್ನು ಹೇಗೆ ಪಾಲನೆ ಮಾಡಬೇಕು, ವಿಧಾನಸಭೆಯ ಚರ್ಚೆಯಲ್ಲಿ ಗೌರವ ಹೆಚ್ಚಿಸಿಕೊಂಡು ಜನಸಾಮಾನ್ಯರಿಗೆ ತಮ್ಮ ಬಗ್ಗೆ ಕಾಳಜಿ ಇದೆ ಎಂಬ ಭಾವನೆಯನ್ನು ಹೇಗೆ ಮೂಡಿಸಬೇಕು ಎಂಬ ವಿಚಾರಗಳ ಬಗ್ಗೆ ಮೂರು ದಿನಗಳ ಟ್ರೈನಿಂಗ್ ಕ್ಯಾಂಪ್​​ನ್ನು ನೂತನ ಶಾಸಕರಿಗೆ ಇಡಲಾಗುತ್ತದೆ ಎಂದು ಹೇಳಿದರು.

ಸರಿಯಾದ ಮಾಹಿತಿ ಮತ್ತು ನಿಯಮಗಳು ನೂತನ ಶಾಸಕರು ಅರ್ಥ ಮಾಡಿಕೊಳ್ಳದಿದ್ದರೆ ಅವರ ಭಾಗವಹಿಸುವಿಕೆ ಕಡಿಮೆಯಾಗುತ್ತದೆ ಎಂಬ ಭಾವನೆಯಿದೆ. ನಾನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತುಕೊಂಡು ಹೆಚ್ಚಿನ ಅವಕಾಶಗಳನ್ನು ಯುವಕರಿಗೆ ಮತ್ತು ಹೊಸ ಮುಖಗಳಿಗೆ ನೀಡಲು ಪ್ರಯತ್ನ ಮಾಡುತ್ತೇನೆ. ಸಭಾಧ್ಯಕ್ಷನಾದರೂ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸುತ್ತೇನೆ. ಕ್ಷೇತ್ರ ಮತ್ತು ಪಕ್ಷದ ಕಾರ್ಯಕರ್ತರ ನಿಕಟ ಸಂಬಂಧ ಇರಿಸಿಕೊಳ್ಳುತ್ತೇನೆ. ಸ್ಪೀಕರ್ ಸ್ಥಾನದ ಘನತೆ ಹೆಚ್ಚಿಸಿ ಕ್ಷೇತ್ರವನ್ನು ಮಾದರಿ ಯಾಗಿಸುತ್ತೇನೆ. ಕರ್ನಾಟಕ ರಾಜ್ಯದ ವಿಧಾನಸಭಾ ಸಭಾಧ್ಯಕ್ಷ ಸ್ಥಾನ ಗೌರವ ಇರುವ ಸ್ಥಾನವಾಗಿದ್ದು, ಇದರ ಗೌರವ ಉಳಿಸುವ ಕಾರ್ಯ ಮಾಡುತ್ತೇನೆ ಮತ್ತು ಜಿಲ್ಲೆಗೆ ಗೌರವ ತರುತ್ತೇನೆ ಎಂದರು.

ಹಿಂದೆ ವಿಧಾನಸಭೆಯ ಸ್ಪೀಕರ್ ಆಗಿದ್ದ ಜಿಲ್ಲೆಯ ವೈಕುಂಠ ಬಾಳಿಗ, ಲೋಕಸಭಾ ಸ್ಪೀಕರ್ ಆಗಿದ್ದ ಕೆ ಎಸ್ ಹೆಗ್ಡೆ ಅವರು ಅಧ್ಯಕ್ಷ ಸ್ಥಾನಕ್ಕೆ ಗೌರವ ಕೊಟ್ಟ ರೀತಿಯಲ್ಲಿ ನಾನು ಪಾಲಿಸುತ್ತೇನೆ. ಪ್ರತಿನಿಧಿಗಳ ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಾಮಾಜಿಕ ಪ್ರಜಾಪ್ರಭುತ್ವ ಅಗತ್ಯ. ಯಾವುದೇ ದ್ವೇಷವಿಲ್ಲದೆ, ಆವೇಶವಿಲ್ಲದೆ ಪ್ರೀತಿ ವಿಶ್ವಾಸ ಮಾಡಿ ಜನಸಾಮಾನ್ಯರ ನೆಮ್ಮದಿ ಬದುಕಿಗೆ ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ