Breaking News

ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ: ಇಬ್ಬರು ಸಾವು

Spread the love

ತುಮಕೂರು: ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆ ಈ ಅವಧಿಯಲ್ಲಿ ಬಹುತೇಕ ಜನರು ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಪ್ರವಾಸ ಕೈಗೊಳ್ಳುವುದು ಸಹಜ.

ಅಂತೆಯೇ ರಾಯಚೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ 11 ಜನರಿಗೆ ಮಾರ್ಗಮಧ್ಯೆ ಜವರಾಯ ಅಡ್ಡಿಯಾಗಿದ್ದಾನೆ. ರಸ್ತೆಯಲ್ಲಿ ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) ಶಶಿಕಲಾ (79) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾಲ್ಕು ಮಂದಿಗೆ ಗಾಯ.. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರಿನಿಂದ ಮೈಸೂರಿಗೆ ಶಶಿಕಲಾ ಕುಟುಂಬಸ್ಥರು ಪ್ರವಾಸಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಡಿ. ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಈ ಸಂಬಂಧ ಹುಲಿಯೂರು ದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಜುಕೇಶನ್ ಕಿಟ್ ಪಡೆಯಲು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ನೂಕು ನುಗ್ಗಲು: ಸರ್ಕಾರದಿಂದ ನೀಡಲಾಗುವ ಎಜುಕೇಶನ್ ಕಿಟ್ ಪಡೆದುಕೊಳ್ಳಲು ಇಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಮುಗಿಬಿದ್ದ ಘಟನೆ ಪಾವಗಡ ಪಟ್ಟಣದ ಪತಂಜಲಿ ನಗರದಲ್ಲಿನ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ನಡೆಯಿತು. ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಎಜುಕೇಶನ್ ಕಿಟ್​ಗಾಗಿ ಟೋಕನ್ ವಿತರಿಸಲು ಕಾರ್ಮಿಕ ಇಲಾಖೆ ಮುಂದಾಗಿತ್ತು. ಪಾವಗಡ ತಾಲ್ಲೂಕಿನಲ್ಲಿ ಒಟ್ಟು 8 ಸಾವಿರ ನೋಂದಾಯಿತ ಕಾರ್ಮಿಕರಿದ್ದಾರೆ. ಈ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಕಿಟ್ ಕೊಡಲಾಗುತ್ತಿದೆ.

 ಕಿಟ್ ಪಡೆಯಲು ವಿದ್ಯಾರ್ಥಿಗಳಿಂದ ನೂಕು ನುಗ್ಗಲು


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ