Breaking News

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

Spread the love

ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು ಯೋಜನೆಗಳಿಗೆ ಅನುಕೂಲವಾಗಲು ಕೇವಲ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಜಲಾಶಯದಿಂದ ನೀರನ್ನು ಬಿಡಲಾಗುತ್ತಿದೆ ಎಂದು ಅವರ ಹೇಳಿದ್ದಾರೆ.

ಬೇಸಿಗೆಯ ಸಮಯದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್, ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್ ಮತ್ತು ಚಿಕ್ಕೋಡಿ ಉಪಕಾಲುವೆಗೆ 500 ಕ್ಯೂಸೆಕ್ಸ್‍ನಂತೆ ನಾಳೆ ದಿನಾಂಕ 26 ರಂದು ಸಾಯಂಕಾಲ 6 ಗಂಟೆಯಿಂದ ಮುಂದಿನ 5 ದಿನಗಳ ವರೆಗೆ ನೀರನ್ನು ಹರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರ ಹಿತದೃಷ್ಠಿಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸುವಂತೆ ಇತ್ತಿಚೆಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರಿಂದ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಸಲುವಾಗಿ ಪ್ರಾದೇಶಿಕ ಆಯುಕ್ತರು ಈ ಬಗ್ಗೆ ಕ್ರಮ ಕೈಗೊಂಡಿದ್ದು, ಕುಡಿಯುವ ನೀರಿಗಾಗಿ ಮಾತ್ರ ಬಳಕೆ ಮಾಡುವಂತೆ ರೈತರಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ನವೆಂಬರ್ ಕ್ರಾಂತಿಯ ಸದ್ದು ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ

Spread the loveಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಇದೀಗ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾರಚನೆಯೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ