Breaking News

ಧಾರವಾಡದಲ್ಲಿ ರಾತ್ರೋರಾತ್ರಿ ಡಬಲ್​ ಮರ್ಡರ್​: ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

Spread the love

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ನಗರದ ಕಮಲಾಪುರ ಹೊರವಲಯದಲ್ಲಿ ಕಳೆದ ರಾತ್ರಿ ನಡೆದಿದೆ.

ಮಹಮ್ಮದ್ ಕುಡಚಿ ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಇವರ ಕುಡಚಿ ಮನೆ ಎದುರು ಘಟನೆ ನಡೆದಿದೆ. ರಾತ್ರಿ 10 ರಿಂದ 11 ಗಂಟೆಯ ಸುಮಾರಿಗೆ ಮನೆ ಎದುರು ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಸ್ಥಳಕ್ಕೆ ಧಾವಿಸಿ ಬಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ನಡೆದ ಕುಡಚಿ ನಿವಾಸದ ಅನತಿ ದೂರದಲ್ಲಿಯೇ ಮತ್ತೊಂದು ಅಪರಿಚಿತ ಶವ ಪತ್ತೆಯಾಗಿದೆ. ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿತ್ತು. ಈತ ಕುಡಚಿ ಮನೆಯಿಂದಲೇ ಓಡಿ ಹೋಗಿರುವ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಮಹಮ್ಮದ್ ಮೃತದೇಹವು ಅವರ ಮನೆಯ ಬೆಡ್​ರೂಂನಲ್ಲಿ ಪತ್ತೆಯಾಗಿದೆ. ಪತ್ನಿ ಸೇರಿದಂತೆ ಸಂಬಂಧಿಕರ ರೋದನೆ ಮುಗಿಲು ಮುಟ್ಟುವಂತಿತ್ತು.

ಘಟನಾ ಸ್ಥಳದಿಂದ ದಾರಿಯುದ್ದಕ್ಕೂ ರಕ್ತ ಹರಿದಿದ್ದು ಕೊಲೆಯಾಗಿರುವ ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ. ಉಪನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣ ಗುಪ್ತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ರಮಣ ಗುಪ್ತಾ, “ಧಾರವಾಡದ ಕಮಲಾಪೂರದಲ್ಲಿ ಡಬಲ್ ಮರ್ಡರ್ ನಡಿದೆ. ನಾನು ಹಾಗೂ ಹಿರಿಯ ಅಧಿಕಾರಿಗಳು ತನಿಖೆ ಮಾಡುತ್ತಿದ್ದೇವೆ. ಫಿಂಗರ್ ಪ್ರಿಂಟ್ ಎಕ್ಸ್‌ಪರ್ಟ್ಸ್‌ ಹಾಗೂ ಡಾಗ್ ಸ್ಕ್ಯಾಡ್​ಗಳಿಂದ ತನಿಖೆ ನಡೆಸಿದ್ದೇವೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ಮಾಡ್ತೇವೆ” ಎಂದು ಮಾಹಿತಿ ನೀಡಿದರು.

ಆರೋಪಿಗಳನ್ನು ಸೆರೆ ಹಿಡಿಯಲು ಬೇರೆ ಬೇರೆ ತನಿಖಾ ತಂಡಗಳನ್ನು ರಚನೆ ಮಾಡಿದ್ದೇವೆ. ತನಿಖೆ ಪ್ರಾಥಮಿಕ ಹಂತದಲ್ಲಿದೆ. ತಕ್ಷಣ ಯಾವುದೇ ಮಾಹಿತಿ ಸಿಕ್ಕಿಲ್ಲ. ರಾತ್ರಿ 10:30 ರಿಂದ 11 ಗಂಟೆ ನಡುವೆ ಕೊಲೆ ನಡೆದಿದೆ. ತನಿಖೆ ಕೈಗೊಂಡಿದ್ದೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸ್ ಆಯುಕ್ತ ರಮಣಗುಪ್ತಾ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಕೊಲೆ ಸುದ್ದಿ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ