Breaking News

ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ : ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಹೇಳಿದ್ದೇನೆ. ಕನಿಷ್ಠ ಹತ್ತು ಜನರಿಗೆ ಅವಕಾಶ ಕೊಡಬೇಕು ಎಂದಿದ್ದೇನೆ. ಅದರಂತೆ ಈಬಾರಿ ಹೊಸಬರಿಗೂ ಅವಕಾಶ ಸಿಗಲಿದೆ ಎಂದರು.

ಯಾರೆಲ್ಲ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಪಟ್ಟಿ ಬಿಡುಗಡೆ ಬಳಿಕ ಗೊತ್ತಾಗಲಿದೆ. ಇನ್ನು 1-2 ತಿಂಗಳಲ್ಲಿ ನಿಗಮ ಮಂಡಳಿ ಸ್ಥಾನ ಸಹ ಭರ್ತಿಯಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ