ಬೆಂಗಳೂರು: ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರು ಅವರ ನೇಮಕಾತಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಮ್ತ್ರಿಗಳ ವಿಶೇಷ ಅಧಿಕರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.
ಈ ಹಿಂದೆ ಬಸವರಾಜ್ ಬೊಮ್ಮಾಯಿ ಸರ್ಕಾರ ಮಾನವೀಯ ದೃಷ್ಟಿಯಿಂದ 2022ರ ಸೆ.22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಹೊಸ ಸರ್ಕಾರ ಬಂದಿರುವ ಬೆನ್ನಲ್ಲೇ ನೂತನ ಅವರ ನೇಮಕಾತಿ ರದ್ದುಪಡಿಸಲಾಗಿದೆ.
Laxmi News 24×7