Breaking News

ಅಂಡರ್‌ಪಾಸ್‌ನಲ್ಲಿ ಯುವತಿ ಸಾವು : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

Spread the love

ಬೆಂಗಳೂರು,ಮೇ.27- ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.ಕಳೆದ ಮೇ 21ರಂದು ಬೆಂಗಲೂರಿನಲ್ಲಿ ಸುರಿದ ರಭಸ ಮಳೆಗೆ ಕೆಆರ್ ಸರ್ಕಲ್ ಅಂಡರ್‍ಪಾಸ್‍ನಲ್ಲಿ ಕ್ಯಾಬ್ ಮುಳುಗಿ ಇನ್ಫೋಸಿಸ್ ಭಾನುರೇಖ (23) ಸಾವನ್ನಪ್ಪಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿ ಜೂನ್ 5ರೊಳಗೆ ಪ್ರತಿಕ್ರಿಯೆ ನೀಡುವಂತೆ ಪೂರ್ವ ವಲಯದ ಮುಖ್ಯ ಆಯುಕ್ತರು ಮತ್ತು ವಲಯ ಆಯುಕ್ತರು ಸೇರಿದಂತೆ ಎಂಟು ಬಿಬಿಎಂಪಿ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸï.ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೆರವು ನೀಡಲು ತಜ್ಞರನ್ನು ನಿಯೋಜಿಸುವಂತೆ ಮುಖ್ಯ ಇಂಜಿನಿಯರ್‍ಗೆ ನಿರ್ದೇಶನ ನೀಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಪಾಟೀಲ್ ಅವರು, ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವಿಭಾಗಕ್ಕೆ ಶಿಪಾರಸು ಮಾಡಿದರು.

ಚರಂಡಿಗಳ ನಿರ್ವಹಣೆ ಜವಾಬ್ದಾರಿ ಬಿಬಿಎಂಪಿ ಅಕಾರಿಗಳ ಮೇಲಿದೆ. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನಎದ್ದು ಕಾನುತ್ತಿದೆ. ಪುರಸಭೆಯ ಪ್ರದೇಶದಲ್ಲಿ ಅಥವಾ ಸ್ಥಳೀಯ ಸಂಸ್ಥೆಯಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನಿಗೆ ಸೂಕ್ತ ರೀತಿಯ ರಸ್ತೆಗಳನ್ನು ಹೊಂದುವ ಹಕ್ಕನ್ನು ಹೊಂದಿರುತ್ತಾರೆ. ಇದು ಸಂವಿಧಾನದಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಭಾಗವಾಗಿದೆ, ಅದು ಪ್ರತಿಯೊಬ್ಬ ವ್ಯಕ್ತಿಗೂ ಬದುಕುವ ಹಕ್ಕನ್ನು ಒದಗಿಸುತ್ತದೆ ಎಂದು ನ್ಯಾಯಮೂರ್ತಿ ಪಾಟೀಲ್ ಆದೇಶದಲ್ಲಿ ತಿಳಿಸಿದ್ದಾರೆ.

ಇದಲ್ಲದೆ, ಬಿಬಿಎಂಪಿಯು ಸಾರ್ವಜನಿಕರಿಂದ ಆಸ್ತಿ ಮತ್ತು ಇತರ ತೆರಿಗೆಗಳನ್ನು ಸಂಗ್ರಹಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ರಾಜ್ಯವು ಸಾರ್ವಜನಿಕರಿಂದ ಮೋಟಾರು ವಾಹನ ಮತ್ತು ಇತರ ತೆರಿಗೆಗಳ ಜೊತೆಗೆ ರಸ್ತೆ ತೆರಿಗೆಯನ್ನೂ ಕೂಡ ಸಂಗ್ರಹಿಸುತ್ತದೆ, ತೆರಿಗೆಗಳನ್ನು ಪಾವತಿಸುವ ಸಾರ್ವಜನಿಕರು ಅಧಿಕಾರಿಗಳು/ನಾಗರಿಕ ಸಂಸ್ಥೆಗಳಿಂದ ಸೌಲಭ್ಯಗಳನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ