Breaking News
Home / ರಾಜಕೀಯ / ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

Spread the love

ಬೆಂಗಳೂರು,ಮೇ 27- ಸಚಿವ ಸಂಪುಟದಲ್ಲಿ ಅವಕಾಶ ವಂಚಿತರು ಅಸಮಾಧಾನಗೊಂಡಿದ್ದು, ಹೈಕಮಾಂಡ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಚಿವಾಕಾಂಕ್ಷಿಗಳ ಬೆಂಬಲಿಗರು ಮೈಸೂರು ಸೇರಿಂತೆ ಕೆಲವು ಕಡೆ ರಸ್ತೆಗಿಳಿದು ಪ್ರತಿಭಟನೆಯನ್ನೂ ನಡೆಸಿದ್ದಾರೆ.ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸಂಪುಟದಲ್ಲಿರುವ ಎಲ್ಲಾ 34 ಸ್ಢಾನಗಳಿಗೂ ಸಚಿವರನ್ನು ನಿಯೋಜಿಸುವ ದಿಟ್ಟ ನಿರ್ಧಾರ ಕೈಗೊಂಡಿದೆ.

ಸಚಿವ ಸ್ಥಾನದ ಮೇಲೆ ಸುಮಾರು 70ಕ್ಕೂ ಹೆಚ್ಚು ಮಂದಿ ಕಣ್ಣಿಟ್ಟಿದ್ದರು, ಅವರಲ್ಲಿ ಬಹುತೇಕರು ದೆಹಲಿಗೆ ತೆರಳಿ ಲಾಬಿ ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯವರ ಜೊತೆ ಸುದೀರ್ಘ ಸಮಾಲೋಚನೆ ನಡೆಸಿದ ಹೈಕಮಾಂಡ್ ಅಳೆದು ತೂಗಿ ಹಿರಿಯರ-ಕಿರಿಯರ ಸಮ್ಮಿಳಿತದ ಸಚಿವ ಸಂಪುಟ ಸಭೆಯನ್ನು ರಚಿಸಿದೆ. ಸಂಪುಟದಲ್ಲಿ ಇನ್ಯಾವ ಸ್ಥಾನಗಳು ಬಾಕಿ ಉಳಿದಿಲ್ಲ.

ಹೀಗಾಗಿ ಅತೃಪ್ತರು ತಮ್ಮ ಅಸಮಾಧಾನವನ್ನು ಹೊರ ಹಾಕಲಾಗದೆ, ಸಹಿಸಲು ಆಗದೆ ಚಡಪಡಿಸುತ್ತಿದ್ದಾರೆ. ಕೆಲವರು ಸಣ್ಣದಾಗಿ ತಮ್ಮ ಅತೃಪ್ತಿಯನ್ನು ಬಹಿರಂಗವಾಗಿ ಹೇಳಿದ್ದಾರೆ. ಮೈಸೂರಿನಲ್ಲಿ ತನ್ವಿರ್ಸೆಠ್ ಬೆಂಬಲಿಗರು, ಬೆಂಗಳೂರಿನಲ್ಲಿ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಬೆಂಬಲಿಗರು, ಹಾವೇರಿಯಲ್ಲಿ ಶಾಸಕ ರುದ್ರಪ್ಪ ಲಮಾಣಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಆರು ಬಾರಿ ಶಾಸಕರಾಗಿರುವ ಮಾಜಿ ಸಚಿವ ತನ್ವಿರ್ಸೆಠ್ರನ್ನು ಸಂಪುಟದಿಂದ ಹೊರಗಿಟ್ಟಿರುವುದರ ವಿರುದ್ಧ ಬೆಂಬಲಿಗರು ಮೈಸೂರಿನ ಗಾಂವೃತ್ತದಲ್ಲಿ ಪೋಟೋ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಒಂದು ಕಾಲದಲ್ಲಿ ಸಿದ್ದರಾಮಯ್ಯ ಆಪ್ತರಾಗಿದ್ದ ತನ್ವಿರ್ಸೆಠ್ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು.

ಕಳೆದ ಚುನಾವಣೆಯಲ್ಲಿ ತಾವು ಸ್ರ್ಪಸುವುದಿಲ್ಲ ಎಂದು ಹೇಳಿದ್ದರು, ಆದರೆ, ಕ್ಷೇತ್ರದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಡಕ್ಕೆ ಮಣಿದು ಮತ್ತೆ ಸ್ಪರ್ಧೆ ಮಾಡಿ ಗೆಲುವು ಸಾಸಿದ್ದಾರೆ. ಅಲ್ಪಸಂಖ್ಯಾತ ಖೋಟಾದಿಂದ ಸಚಿವರಾಗುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಕೊನೆ ಗಳಿಗೆಯಲ್ಲಿ ಪಟ್ಟಿಯಿಂದ ತನ್ವಿರ್ಸೆಠ್ ಹೊರಗುಳಿದಿದ್ದಾರೆ.

 

ಇದು ಸಹಜವಾಗಿ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದ್ದು, ಪ್ರತಿಭಟನೆಗೂ ಕಾರಣವಾಗಿದೆ.  ಪ್ರತಿಭಟನೆ ನಡೆಸಿದ್ದ ಬೆಂಬಲಿಗರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತನ್ವಿರ್ ಸೆಠ್ ಗೈರು ಹಾಜರಾಗಿದ್ದು ಗಮನ ಸೆಳೆದಿತ್ತು.

ವಿಜಯನಗರ ಕ್ಷೇತ್ರ ಶಾಸಕ ಎಂ.ಕೃಷ್ಣಪ್ಪ ಅವರ ಬೆಂಬಲಿಗರು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದ ರಾಜಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೃಷ್ಣಪ್ಪ ಅವರ ಭಾವಚಿತ್ರ ಹಿಡಿದು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯನಗರ ಹಾಗೂ ಗೋವಿಂದ ರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಸಲು ಕೃಷ್ಣಪ್ಪ ಕಾರಣವಾಗಿದ್ದಾರೆ. ಅವರನ್ನು ಸಂಪುಟದಿಂದ ಹೊರಗಿಟ್ಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಭವನದ ಮುಂದೆ ಕೃಷ್ಣಪ್ಪ ಅವರ ಬೆಂಬಲಿಗರ ಪ್ರತಿಭಟನೆ ನಾಯಕರ ಗಮನ ಸೆಳೆದಿತ್ತು.

ಮತ್ತೊಂದೆಡೆ ಲಂಬಾಣಿ ಸಮುದಾಯದ ಶಾಸಕ ರುದ್ರಪ್ಪ ಲಮಾಣಿ ಅವರಿಗೂ ಸಚಿವ ಸ್ಥಾನ ದೊರೆಯದಿರುವುದಕ್ಕೆ ಆಕ್ರೋಶ ಬೇಸರಗೊಂಡಿದ್ದಾರೆ. ಅವರ ಬೆಂಬಲಿಗರು ಹಾವೇರಿಯಲ್ಲಿ ರುದ್ರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಮತ್ತೊಬ್ಬ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೊನೆ ಕ್ಷಣದಲ್ಲಿ ಸಂಪುಟದಿಂದ ತಮ್ಮನ್ನು ಹೊರಗಿಟ್ಟಿದ್ದಕ್ಕಾಗಿ ತೀವ್ರ ಅಸಮಧಾನ ಹೊಂದಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವಿನ ಬಣ ರಾಜಕೀಯದಿಂದಾಗಿ ತಮಗೆ ಅವಕಾಶ ತಪ್ಪಿದೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಎನ್.ಎಸ್.ಬೋಸರಾಜ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲಾಗಿದೆ. ಮುಂದೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ ವಿಧಾನ ಪರಿಷತ್ನಲ್ಲಿ ಹಿರಿಯ ಸದಸ್ಯರಾಗಿರುವ ಬಿ.ಕೆ.ಹರಿಪ್ರಸಾದ್, ಸಲಿಂ ಅಹ್ಮದ್, ನಜೀರ್ ಅಹ್ಮದ್, ಪ್ರಕಾಶ್ ರಾಥೋಡ್ ಸೇರಿದಂತೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೂನ್ನಲ್ಲಿ ವಿಧಾನ ಪರಿಷತ್ ಕಲಾಪ ನಡೆಯಲಿದ್ದು ಅಲ್ಲಿ ಸಭಾನಾಯಕ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿದ್ದು, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಭಾಧ್ಯಕ್ಷರ ನ್ನಾಗಿ ನೇಮಿಸುವ ಭರವಸೆಯೊಂದಿಗೆ ಹರಿಪ್ರಸಾದ್ರನ್ನು ಸಮಾಧಾನ ಪಡಿಸಲಾಗುತ್ತಿದೆ ಎನ್ನಲಾಗಿದೆ.
ಇನ್ನೊಂದೆಡೆ ಕೆಪಿಸಿಸಿ ಕಾಯಾಧ್ಯಕ್ಷರೂ ಆಗಿರುವ ಸಲಿಂ ಅಹ್ಮದ್ ಅವರು ತಾವು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಅವಕಾಶ ಸಿಗದೆ ಇರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ. ವಿನಯ್ ಕುಲಕರ್ಣಿ, ಟಿ.ಬಿ.ಜಯಚಂದ್ರ ಸೇರಿದಂತೆ ಅನೇಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿ ವಿಫಲವಾಗಿದ್ದು, ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ