ಬೆಂಗಳೂರು : ನೂತನ ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲ ಖಾಲಿ ಇರುವ ಶಿಕ್ಷಕರಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.
ಒಟ್ಟು 33 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರಾಥಮಿಕ ಶಾಲೆಗಳಲ್ಲಿ ಪಾಠಮಾಡಲು ಒಟ್ಟು 27 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ ಪಾಠ ಮಾಡಲು ಒಟ್ಟು 6 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯು ಸೂಚಿಸಿದೆ.
ನೇಮಕಗೊಳ್ಳುವ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 10,000 ರೂ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂ. ಗೌರವಧನ ನೀಡಲಾಗುತ್ತದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಹುದ್ದೆಗಳಿವೆ.
Laxmi News 24×7