Breaking News

ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಶಿವಾನಂದ ಭೂಸಗೋಳ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ಕೊಟಬಾಗಿ ಸಮೀಪ ಈ ಅಪಘಾತ ಸಂಭವಿಸಿದೆ.

ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ
ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.ಸ್ಥಳಕ್ಕಾಗಮಿಸಿದ ಹುಕ್ಕೇರಿ ಪೋಲಿಸ್ ಇನ್ಸ್ಪೆಕ್ಟರ್ ರಫೀಕ ತಹಸೀಲ್ದಾರ ಮತ್ತು ಸಿಬ್ಬಂದಿಗಳಾದ ಮಂಜುನಾಥ ಕಬ್ಬೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ