ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ ಸೋಮವಾರ ನವದೆಹಲಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಚುನಾವಣಾ ಪ್ರಚಾರ ಸಭೆಗೆ ನಿಪ್ಪಾಣಿ ಮತಕ್ಷೇತ್ರಕ್ಕೆ ಆಗಮಿಸಿ ತಮ್ಮ ಗೆಲುವಿಗೆ ಸಹಕರಿಸಿದ್ದಕ್ಕೆ ಶಶಿಕಲಾ ಜೊಲ್ಲೆ ಅವರು ಗಡ್ಕರಿ ಅವರಿಗೆ ಮನಃಪೂರ್ವಕ ಧನ್ಯವಾದವನ್ನು ಸಲ್ಲಿಸಿದರು.
ಇದೇ ವೇಳೆ ಮನೆ ಮಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿ ಮನೆಗೆ ಬಂದ ಸಲುವಾಗಿ ಅವರು ಶಶಿಕಲಾ ಜೊಲ್ಲೆಯವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ಮಾಡಿದರು.
Laxmi News 24×7