Home / ರಾಜಕೀಯ / ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ

ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ

Spread the love

ಬೆಂಗಳೂರು: ”ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಾದ ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ತಾವು ವ್ಯಾಸಂಗ ಮಾಡಿರುವ ಎನ್‌ಪಿಸಿ ಶಾಲೆಗೆ ಸೋಮವಾರ ಭೇಟಿ ನೀಡಿದರು. ತಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ. ಈ ನ್ಯಾಷನಲ್ ಪಬ್ಲಿಕ್ ಶಾಲೆ ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ. ಮಕ್ಕಳು ಶಿಕ್ಷಣಕ್ಕಾಗಿ ಹಳ್ಳಿಯಿಂದ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರ ಜೊತೆಗೆ ಈ ಬಗ್ಗೆ ಸಮಗ್ರ ಚರ್ಚೆ ಮಾಡುತ್ತೇವೆ” ಎಂದರು.

”ಹಳ್ಳಿ ಜನರಿಗೂ ಕೂಡ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ” ಎಂದು ಅವರು, ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಪ್ರತಿಕ್ರಿಯಿಸಿದ ಅವರು, “ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ” ಎಂದು ತಿರುಗೇಟು ನೀಡಿದರು. ಬೆಂಗಳೂರಿನ ಅಧಿಕಾರಿಗಳ ಜೊತೆ ನಡೆಯಲಿರುವ ಸಭೆ ಬಗ್ಗೆ ಉತ್ತರಿಸಿದ ಅವರು, “ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಇದರಿಂದ ಸಭೆ ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದರು.

ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ: ”ನಾವು ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ