Breaking News
Home / ರಾಜಕೀಯ / ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು,ಬೆಳಗಾವಿ 16,765, B.P.L. ರೇಷನ್ ಕಾರ್ಡ್ ರದ್ದು.!

ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು,ಬೆಳಗಾವಿ 16,765, B.P.L. ರೇಷನ್ ಕಾರ್ಡ್ ರದ್ದು.!

Spread the love

ಬೆಂಗಳೂರು : ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಆಹಾರ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯಾದ್ಯಂತ 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ 3,08,345 ಬಿಪಿಎಲ್ ಕಾರ್ಡ್ ಮತ್ತು 21,679 ಅಂತ್ಯೋದಯ ಕಾರ್ಡ್ ಗಳಿವೆ.ಬೆಂಗಳೂರಿನಲ್ಲಿ 34,705, ವಿಜಯಪುರದಲ್ಲಿ 28, 735, ಕಲಬುರಗಿ 16,945, ಬೆಳಗಾವಿ 16,765, ರಾಯಚೂರು 16,693 ಹಾಗೂ ಚಿತ್ರದುರ್ಗದಲ್ಲಿ 16,537 ರೇಷನ್ ಕಾರ್ಡ್ ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

2021-22 ನೇ ಸಾಲಿನಲ್ಲಿ ಆನ್ ಲೈನ್ ಮೂಲಕ ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿ ರಾಜ್ಯಾದ್ಯಂತ ಸಲ್ಲಿಕೆಯಾಗಿರುವ 7,61,902 ಅರ್ಜಿಗಳ ಪೈಕಿ ,18,046 ಅರ್ಜಿಗಳು ವಿಲೇವಾರಿಯಾಗಿವೆ. 2,60,418 ಅರ್ಜಿಗಳು ಅನುಮೋದನೆಯಾದರೆ, 1,57,625 ಅರ್ಜಿಗಳು ತಿರಸ್ಕೃತಗೊಂಡಿವೆ. 3,43,856 ಅರ್ಜಿಗಳು ಬಾಕಿ ಉಳಿದಿದ್ದು, ವಿಲೇವಾರಿಗೆ ಸರ್ಕಾರದ ಅನುಮತಿಗಾಗಿ ಆಹಾರ ಇಲಾಖೆ ಕಾಯುತ್ತಿದೆ.

ಅನುಮತಿ ಸಿಕ್ಕ ತಕ್ಷಣ ಪ್ರಕ್ರಿಯೆ ಶುರು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ