ಬೆಂಗಳೂರು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾಗಿರುವ ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.
ಅವರ ಜಾಗಕ್ಕೆ 1987ನೇ ಬ್ಯಾಚಿನ ಭಾರತೀಯ ಅರಣ್ಯ ಸೇವೆ ಅಧಿಕಾರಿ ಹಾಗೂ ಪ್ರಸ್ತುತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ರಂಜನ್ ಅವರನ್ನು ಜೂನ್ 1 ರಿಂದ ಅನ್ವಯ ಆಗುವಂತೆ ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
Laxmi News 24×7