Breaking News

ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ:ಪರಿಷತ್ ಸದಸ್ಯ ವಿಶ್ವನಾಥ್ ಅವರ ಪ್ರಶ್ನೆ

Spread the love

ಮೈಸೂರು: ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ ಎಂದು ತಮ್ಮ ಪಕ್ಷದ ನಾಯಕರನ್ನೇ ಪರಿಷತ್ ಸದಸ್ಯ ವಿಶ್ವನಾಥ್ ಅವರು ಪ್ರಶ್ನೆ ಮಾಡಿದ್ದಾರೆ.

ಸದ್ಯ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಬಿಹಾರದಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಉಚಿತ ಕೊರೊನಾ ಲಸಿಕೆ ನೀಡುವುದಾಗಿ ತಿಳಿಸಿದೆ. ಇದೇ ವಿಚಾರ ಈಗ ಸಖತ್ ಚರ್ಚೆಯಾಗುತ್ತಿದೆ. ಇಂದು ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಕೊರೊನಾ ವಿಚಾರ ರಾಜಕೀಯ ಚರ್ಚೆಗೆ ಬಳಸಿಕೊಳ್ಳಬಾರದು ಎಂದಿದ್ದಾರೆ.

ಕೊರೊನಾ ವಿಚಾರವನ್ನ ರಾಜಕೀಯಕ್ಕೆ ತರಬೇಡಿ. ವೋಟ್ ಹಾಕಿ ಗೆಲ್ಲಿಸಿದರೆ ಉಚಿತ ಲಸಿಕೆ ಕೊಡುತ್ತೀರಾ ಸರಿ. ಸೋಲಿಸಿಬಿಟ್ಟರೆ ಜನರನ್ನು ಸಾಯಿಸಿ ಬಿಡುತ್ತೀರಾ? ಯಾವುದೇ ಪಕ್ಷವಾಗಲಿ ಕೊರೊನಾ ವಿಚಾರ ರಾಜಕೀಯ ಚರ್ಚೆಗೆ ಬಳಸಿಕೊಳ್ಳಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಮ್ಮ ಪಕ್ಷದ ಪ್ರಣಾಳಿಕೆ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ