Breaking News

ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ

Spread the love

ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ.

ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ.

ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು 36,951 ಹಾಗೂ 15, 867 ಮಾಧ್ಯಮಿಕ ಶಾಲೆಗಳಿವೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಆಗಮಿಸಿ ಕೆಲವು ಹಿರಿಯ ತರಗತಿ ಮಕ್ಕಳು, ಪೋಷಕರ ಸಹಕಾರದೊಂದಿಗೆ ಕಳೆದ ಒಂದೆರಡು ದಿನಗಳಿಂದ ಶಾಲೆ ಸ್ವಚ್ಛಗೊಳಿಸುವ ಕಾರ್ಯ ಮಾಡಿದ್ದಾರೆ. ಆಡಳಿತ ಮಂಡಳಿ ಶಾಲೆಗಳಲ್ಲಿ ತರಗತಿ ಚಟುವಟಿಕೆಗಳ ಆರಂಭಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಶಾಲೆಗಳು ಆರಂಭವಾಗುತ್ತಿದ್ದಂತೆ 1 ರಿಂದ 3ನೇ ತರಗತಿಗೆ ಆರಂಭದ 30 ದಿನಗಳು ಹಾಗೂ 4ರಿಂದ 10ನೇ ತರಗತಿ ಮಕ್ಕಳಿಗೆ 15 ದಿನಗಳ ಕಾಲ ಸೇತುಬಂಧ ಕಾರ್ಯಕ್ರಮ ನಡೆಸುವಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಎಲ್ಲ ಶಾಲೆಗಳಿಗೆ ತಿಳಿಸಿದೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ