ಬೆಳಗಾವಿ: ‘ಗೃಹ ಲಕ್ಷ್ಮೀ’ ಯೋಜನೆಯಡಿ ₹ 2,000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ ಅತ್ತೆಗೆ ಪ್ರಾಧಾನ್ಯ ಕೊಡಬೇಕಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ, ಅತ್ತೆಗೆ ಈ ನೆರವು ಸಿಗಲಿದೆ’ ಎಂದರು.
ಇದಕ್ಕೆ ಧ್ವನಿಗೂಡಿಸಿದ ಸಚಿವ ಸತೀಶ ಜಾರಕಿಹೊಳಿ, ‘ಸ್ವತಃ ಅತ್ತೆಯೇ ಮುಂದೆ ಬಂದು ಸೊಸೆಗೆ ನೆರವು ಕೊಡಲು ಬಯಸಿದರೆ ಮಾತ್ರ ಸೊಸೆಗೆ ಕೊಡುತ್ತೇವೆ’ ಎಂದು ಹೇಳಿದರು.
Laxmi News 24×7