Breaking News

ಕಾಂಗ್ರೆಸ್‌ ಗ್ಯಾರಂಟಿ | ಶೀಘ್ರದಲ್ಲೇ ಒಳ್ಳೆಯ ಸುದ್ದಿ: ಸಂತೋಷ್ ಲಾಡ್

Spread the love

ಹುಬ್ಬಳ್ಳಿ: ‘ಜೂನ್ 1ರಂದು ಕಾಂಗ್ರೆಸ್‌ ಸ‌ರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶೀಘ್ರದಲ್ಲೇ ರಾಜ್ಯದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

 

ಸಚಿವರಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಮಂಗಳವಾರ ಭೇಟಿ ನೀಡಿದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕಳೆದ ಬಾರಿ ಕಾರ್ಮಿಕ ಸಚಿವ ಸ್ಥಾನ ನೀಡಿದ್ದಾಗ ನನಗೆ ಕಡಿಮೆ ಸಮಯ ಸಿಕ್ಕಿತ್ತು. ಈಗ ಮತ್ತೆ ಅದೇ ಖಾತೆ ಸಿಕ್ಕಿರುವುದರಿಂದ ಹೆಚ್ಚು ಹೊಸ ಕಾರ್ಯಕ್ರಮಗಳನ್ನು ನೀಡುವ ಅವಕಾಶ ದೊರಕಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗುವೆ’ ಎಂದರು.

‘ಕಾರ್ಮಿಕ ಕಲ್ಯಾಣ ನಿಧಿಯನ್ನು ಬಿಜೆಪಿ ದುರ್ಬಳಕೆ ಮಾಡಿಕೊಂಡಿದೆ’ ಎಂಬ ಆರೋಪದ ಕುರಿತ ಮಾಧ್ಯಮದವರ ಪ್ರಶ್ನೆಗೆ, ‘ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಉತ್ತರಿಸಿದರು.

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಅನ್ವರ್ ಮುಧೋಳ, ಸದಾನಂದ ಡಂಗನವರ ಇದ್ದರು


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ