Home / Uncategorized / ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ

ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ

Spread the love

ಎಂ.ಕೆ.ಹುಬ್ಬಳ್ಳಿ: ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರಗಳನ್ನು ಬೆಳೆಸಬೇಕು. ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಸಮೀಪದ ದಾಸ್ತಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.

ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಸಾರ್ವಜನಿಕರ ಸಹಾಯ, ಸಹಕಾರವು ಮುಖ್ಯ ಎಂದರು.

ಶಾಸಕ ಬಾಬಾಸಾಹೇಬ ಪಾಟೀಲ ಹೂ ಕೊಟ್ಟು, ಸಿಹಿ ತಿನ್ನಿಸಿ ವಿದ್ಯಾರ್ಥಿಗಳನ್ನು ಶಾಲೆಗೆ ಭರಮಾಡಿಕೊಂಡರು. ನಂತರ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಿಸಿದರು.

ಶಾಸಕರಿಗೆ ಶಾಲೆ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಗೌರವಿಸಲಾಯಿತು. ಡೊಳ್ಳು ಬಾರಿಸಿ, ಅಲಂಕೃತ ಎತ್ತಿನ ಚಕ್ಕಡಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಕುಳಿತು ಶಾಸಕರು ಗಮನ ಸೆಳೆದರು.

ಬಿಇಒ ಆರ್.ಟಿ.ಬಳಿಗಾರ, ಸ್ಥಳೀಯ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಶಿದ್ರಾಮನಿ, ಪಿಡಿಒ ಜಯರಾಂ ಕಾದ್ರೋಳ್ಳಿ, ಮುಖ್ಯಶಿಕ್ಷಕ ಕೆ.ಡಿ.ಹೊಳಿ, ಮುಖಂಡಾದ ಶಿವನಗೌಡ ಪಾಟೀಲ, ಶಿಕ್ಷಕ ಮಲ್ಲಿಕಾರ್ಜುನ ಕಲ್ಮಠ, ಶಂಕರಯ್ಯ ಶಹಪೂರಮಠ, ಸಿಆರ್‍ಪಿ ವಿನೋದ ಪಾಟೀಲ ಇದ್ದರು.

 ಎಂ.ಕೆ.ಹುಬ್ಬಳ್ಳಿ ಸಮೀಪದ ದಾಸ್ತಿಕೊಪ್ಪ ಗ್ರಾಮದಲ್ಲಿ ಬುಧವಾರ ನಡೆದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಅಲಂಕೃತ ಎತ್ತಿನ ಚಕ್ಕಡಿಯಲ್ಲಿ ಕುಳಿತು ಗಮನ ಸೆಳೆದ ಶಾಸಕ ಬಾಬಾಸಾಹೇಬ ಪಾಟೀಲ


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ