Breaking News
Home / ಜಿಲ್ಲೆ / ಬೆಳಗಾವಿ / ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ

ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ

Spread the love

ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ಅವರು ತಿಳಿಸಿದರು.

  ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷರಾದ ಡಾ. ಭೀಮಶಿ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ  ಹೆಬ್ಬಾಳಕರ ಅವರು ಆಗಮಿಸಲಿದ್ದಾರೆ. ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಎಚ್.ಆರ್. ರಂಗನಾಥ, ವಿ.ಆರ್.ಎಲ್ ಗ್ರೂಪ್  ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

 ಅತಿಥಿಗಳಾಗಿ ಶ್ರೀಲಂಕಾ ದೇಶದ ಅಂತಾರಾಷ್ಟ್ರೀಯ ಖ್ಯಾತ ಕ್ರಿಕೆಟ್ ಪಟು ಸನತ್ ಜಯಸೂರ್ಯ, ಖ್ಯಾತ ಉದ್ಯಮಿ ಸಂಜಯ ಘೋಡಾವತ್, ಶ್ರೀಲಂಕಾ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಭೋವೆಂಕಾ ಹರ್ಥ, ಶ್ರೀಲಂಕಾ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾದ ಛಲಕಾ ಗಜಬಾಹು ಹಾಗೂ ಭಾರತೀಯ ಕಾರ್ಯನಿರತ ಪತ್ರಕರ್ತರ ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷರಾದ ಬಿ.ವಿ ಮಲ್ಲಿಕಾರ್ಜುನಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮತ್ತು ಬೆಳಗಾವಿ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನದಲ್ಲಿ ಪರಿಸರ ಹಾಗೂ ಮಾಧ್ಯಮ ಚಿಂತನಾಗೋಷ್ಟಿ ನಡೆಯಲಿದ್ದು, ದಕ್ಷಿಣ ಕೊರಿಯಾದ ಹಿರಿಯ ಪತ್ರಕರ್ತೆ ಗೀತಿಕಾ ತಾಲೂಕದಾರ, ಲಂಡನ್ ಹಿರಿಯ ಪತ್ರಕರ್ತರಾದ ಫಾತೂಮ್, ಶ್ರೀಲಂಕಾದ ಉಪುಲ್ ಜಯಸಿಂಘೆ, ಸೌಜ್ಞಾ ಪೌಡೆಲ್, ಡಾ. ಗೀತಾ ಕಿರಣ್, ಬಾಂಗ್ಲಾದೇಶದ ಮೊಹಮದ್ ಶಾಮೀಮ್ ಅವರು ಇರಲಿದ್ದಾರೆ ಎಂದು ಕುರಂದವಾಡೆ ತಿಳಿಸಿದರು.

Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ