Breaking News

ಲೈಂಗಿಕ ಕಿರುಕುಳ ಆರೋಪ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹ

Spread the love

ಬೆಳಗಾವಿ: ದೇಶದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ ಸಿಂಗ್ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು. ಬೆಳಗಾವಿ, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವಡೆ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

 ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹ

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ, ಆರೋಪಿ ಬ್ರಿಜ್ ಭೂಷಣ್ ಸಿಂಗ್‌ ಅವರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ತಕ್ಷಣ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಒಲಿಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ವಿನಿಷ್ ಪೊಗಟ್ ಮುಂತಾದ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಬ್ರಿಜ್ ಭೂಷಣ್ ಸಿಂಗ್ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ನವದೆಹಲಿಯ ಜಂತರ್ ಮಂಥರ್‌ನಲ್ಲಿ ಭಜರಂಗ್ ಪೂನಿಯಾ ಸೇರಿದಂತೆ ದೇಶದ ಹಲವು ಕುಸ್ತಿ ಕ್ರೀಡಾಪಟುಗಳು ಕಳೆದ 45 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಆರೋಪಿಯನ್ನು ಈವರೆಗೆ ಬಂಧಿಸಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ